ಯೆಹೆಜ್ಕೇಲನು 7:13 - ಕನ್ನಡ ಸಮಕಾಲಿಕ ಅನುವಾದ13 ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮಾರಿದವನು ಎಷ್ಟು ವರುಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವುದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವುದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಬದಲಾಗುವುದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |