Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:18 - ಕನ್ನಡ ಸಮಕಾಲಿಕ ಅನುವಾದ

18 ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:18
14 ತಿಳಿವುಗಳ ಹೋಲಿಕೆ  

ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.


ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.


ನಾನು ಈ ವಿಷಯವನ್ನು ನೆನಪು ಮಾಡಿಕೊಂಡಾಗ ಭಯಪಡುತ್ತೇನೆ; ನನ್ನ ದೇಹಕ್ಕೆ ನಡುಕ ಹಿಡಿಯುತ್ತದೆ.


ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.


ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು