ಯೆಹೆಜ್ಕೇಲನು 7:24 - ಕನ್ನಡ ಸಮಕಾಲಿಕ ಅನುವಾದ24 ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೀಗಿರಲು ನಾನು ಅತಿದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು. ಅಧ್ಯಾಯವನ್ನು ನೋಡಿ |