ಯೆಹೆಜ್ಕೇಲನು 7:27 - ಕನ್ನಡ ಸಮಕಾಲಿಕ ಅನುವಾದ27 ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿ |