Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:9 - ಕನ್ನಡ ಸಮಕಾಲಿಕ ಅನುವಾದ

9 ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:9
13 ತಿಳಿವುಗಳ ಹೋಲಿಕೆ  

ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.


ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,


ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು