ಯೆಹೆಜ್ಕೇಲನು 8:1 - ಕನ್ನಡ ಸಮಕಾಲಿಕ ಅನುವಾದ1 ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 [ಯೆಹೋಯಾಖೀನನು ಸೆರೆಯಾದ] ಆರನೆಯ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕೂತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿವಸ ನಾನು ನನ್ನ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನ್ನ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಆರನೇ ವರ್ಷದ, ಆರನೆಯ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.