Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:10 - ಕನ್ನಡ ಸಮಕಾಲಿಕ ಅನುವಾದ

10 ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಕಟಾ, ಎಲ್ಲಾ ಜಾತಿಯ ಕ್ರಿವಿುಕೀಟಗಳೂ ಅಸಹ್ಯಮೃಗಗಳೂ ಇಸ್ರಾಯೇಲ್‍ವಂಶದವರು ಪೂಜಿಸುವ ಸಕಲಮೂರ್ತಿಗಳೂ ಸುತ್ತಲೂ ಗೋಡೆಯಲ್ಲಿ ಚಿತ್ರಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:10
22 ತಿಳಿವುಗಳ ಹೋಲಿಕೆ  

ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು.


ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವುದೊಂದು ಮೀನಿನ ಹೋಲಿಕೆಯ ವಿಗ್ರಹವನ್ನೂ ಮಾಡಬಾರದು.


ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು.


ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.


ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”


“ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,


ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು