ಯೆಹೆಜ್ಕೇಲನು 8:12 - ಕನ್ನಡ ಸಮಕಾಲಿಕ ಅನುವಾದ12 ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿ |