14 ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.
“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.
ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.
ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”