Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:2 - ಕನ್ನಡ ಸಮಕಾಲಿಕ ಅನುವಾದ

2 ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ಕಾಣಿಸಿತು. ಸೊಂಟದ ಕೆಳಗಿನ ರೂಪವು ಬೆಂಕಿಯಂತಿತ್ತು ಮತ್ತು ಅವನ ಸೊಂಟದ ಮೇಲಿನ ಭಾಗವು ಹೊಳೆಯುವ ಲೋಹದಂತೆ ಪ್ರಕಾಶಮಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ನನಗೆ ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತ ಕಾಂತಿಯೊಂದು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನ್ನು ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಬೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:2
7 ತಿಳಿವುಗಳ ಹೋಲಿಕೆ  

ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು.


ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು