Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:6 - ಕನ್ನಡ ಸಮಕಾಲಿಕ ಅನುವಾದ

6 ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:6
32 ತಿಳಿವುಗಳ ಹೋಲಿಕೆ  

ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ನಾನು ನೋಡುವಾಗಲೇ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿಕೊಂಡು, ಭೂಮಿಯನ್ನು ಬಿಟ್ಟು ಮೇಲಕ್ಕೇರಿ ಹೋದರು. ಅವು ಹೊರಟಾಗ, ಚಕ್ರಗಳೂ ಅದರ ಸಂಗಡ ಇದ್ದವು. ಅವರು ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಇಸ್ರಾಯೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು.


ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು.


ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು.


ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ?


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ.


ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.


ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು.


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


“ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.


ಇದಲ್ಲದೆ ಅವರು, “ಮತ್ತೊಂದು ಸಾರಿ ತಿರುಗಿಕೋ. ಅವರು ಮಾಡುವ ಇನ್ನೂ ಮಹಾ ಅಸಹ್ಯ ಕಾರ್ಯಗಳನ್ನು ನೋಡುವೆ,” ಎಂದರು.


ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.


ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು.


ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು