ಯೆಹೆಜ್ಕೇಲನು 9:1 - ಕನ್ನಡ ಸಮಕಾಲಿಕ ಅನುವಾದ1 ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಆತನು - ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಮೇಲೆ ದೇವರು ಗಟ್ಟಿಯಾದ ಧ್ವನಿಯಿಂದ ಕರೆಯುವುದು ನನಗೆ ಕೇಳಿಸಿತು: “ಪಟ್ಟಣವನ್ನು ದಂಡಿಸಲು ನೇಮಕಗೊಂಡಿರುವವರೇ, ಇಲ್ಲಿಗೆ ಬನ್ನಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಾಶದ ಆಯುಧವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಬನ್ನಿ.” ಅಧ್ಯಾಯವನ್ನು ನೋಡಿ |