Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:11 - ಕನ್ನಡ ಸಮಕಾಲಿಕ ಅನುವಾದ

11 ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, “ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನಾರುಬಟ್ಟೆಯನ್ನು ಧರಿಸಿಕೊಂಡು ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದವನು, “ನೀನು ಆಜ್ಞಾಪಿಸಿದ ಮೇರೆಗೆ ನಾನು ಮಾಡಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:11
9 ತಿಳಿವುಗಳ ಹೋಲಿಕೆ  

ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.


ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು