Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:2 - ಕನ್ನಡ ಸಮಕಾಲಿಕ ಅನುವಾದ

2 ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:2
21 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.


ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.


ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.


ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.


ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.


ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,


ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.


ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು.


ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು