Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:6 - ಕನ್ನಡ ಸಮಕಾಲಿಕ ಅನುವಾದ

6 ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:6
27 ತಿಳಿವುಗಳ ಹೋಲಿಕೆ  

ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.


ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


“ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


“ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು.


ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,


“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


“ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು