Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:8 - ಕನ್ನಡ ಸಮಕಾಲಿಕ ಅನುವಾದ

8 ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇವಿುನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು ಇಸ್ರಾಯೇಲಿನ ಶೇಷವನ್ನೆಲ್ಲಾ ನಾಶಮಾಡುವಿಯಾ ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿದ ಇಸ್ರೇಲರನ್ನು ನೀನು ನಿರ್ಮೂಲ ಮಾಡುವೆ!” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:8
16 ತಿಳಿವುಗಳ ಹೋಲಿಕೆ  

ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,


ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು