ಯೆಹೋಶುವ 1:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆಯು ಯೆಹೋವನ ಸೇವಕನಾಗಿದ್ದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯ ಮರಣಾನಂತರ ಯೆಹೋವನು ಯೆಹೋಶುವನೊಡನೆ ಮಾತನಾಡಿ, ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.