ಯೆಹೋಶುವ 1:14 - ಕನ್ನಡ ಸಮಕಾಲಿಕ ಅನುವಾದ14 ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ಇರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು ಹೊಳೆದಾಟಿ ಅವರಿಗೆ ಸಹಾಯಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.