Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:15
15 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”


ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:


ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,


ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.


ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು