ಯೆಹೋಶುವ 1:16 - ಕನ್ನಡ ಸಮಕಾಲಿಕ ಅನುವಾದ16 ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಯೆಹೋಶುವನಿಗೆ, “ನೀವು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ. ಎಲ್ಲಿಗೆ ಕಳಿಸಿದರೂ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಯೆಹೋಶುವನಿಗೆ - ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸಿದರೂ ಹೋಗುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಅವರು ಯೆಹೋಶುವನಿಗೆ, “ನೀನು ಆಜ್ಞಾಪಿಸಿದ್ದನ್ನೆಲ್ಲಾ ನಾವು ಮಾಡುತ್ತೇವೆ; ನೀನು ನಮ್ಮನ್ನು ಕಳಿಸಿದ್ದಲ್ಲಿಗೆಲ್ಲ ಹೋಗುತ್ತೇವೆ. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.