Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:17 - ಕನ್ನಡ ಸಮಕಾಲಿಕ ಅನುವಾದ

17 ನಾವು ಮೋಶೆಯ ಎಲ್ಲಾ ಮಾತು ಕೇಳಿದ ಹಾಗೆಯೇ ನಿನ್ನ ಮಾತು ಕೇಳುವೆವು. ನಿನ್ನ ದೇವರಾದ ಯೆಹೋವ ದೇವರು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾವು ಮೋಶೆಯ ಎಲ್ಲಾ ಮಾತುಗಳನ್ನು ಕೇಳಿದಂತೆ ನಿನ್ನ ಮಾತುಗಳನ್ನೂ ಕೇಳುವೆವು; ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ಮೋಶೆಯ ಆಜ್ಞೆಗಳನ್ನೆಲ್ಲಾ ಪಾಲಿಸಿದೆವು. ಅದೇ ರೀತಿ ನಿನ್ನ ಆಜ್ಞೆಗಳನ್ನೆಲ್ಲಾ ಪಾಲಿಸುತ್ತೇವೆ. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:17
19 ತಿಳಿವುಗಳ ಹೋಲಿಕೆ  

ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! ನಾವು ಕರೆಯುವಾಗ ನಮಗೆ ಉತ್ತರಕೊಡಿರಿ!


ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.


ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.


ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು.


ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು.


ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,


ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.


ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.


ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು