Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:4 - ಕನ್ನಡ ಸಮಕಾಲಿಕ ಅನುವಾದ

4 ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಣ್ಯವೂ ಈ ಲೆಬನೋನ್ ಪರ್ವತವೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವದು; ನಿಮ್ಮ ಸೀಮೆಯು ಪಶ್ಚಿಮ ದಿಕ್ಕಿನ ಮಹಾಸಾಗರದವರೆಗೆ ವಿಸ್ತರಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:4
12 ತಿಳಿವುಗಳ ಹೋಲಿಕೆ  

“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.


ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು.


ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು