Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:5 - ಕನ್ನಡ ಸಮಕಾಲಿಕ ಅನುವಾದ

5 ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:5
34 ತಿಳಿವುಗಳ ಹೋಲಿಕೆ  

ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ನಾವು ಮೋಶೆಯ ಎಲ್ಲಾ ಮಾತು ಕೇಳಿದ ಹಾಗೆಯೇ ನಿನ್ನ ಮಾತು ಕೇಳುವೆವು. ನಿನ್ನ ದೇವರಾದ ಯೆಹೋವ ದೇವರು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.


ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.


ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.


ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.


ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು.


ನನ್ನ ಜನವಾದ ಇಸ್ರಾಯೇಲರ ಕೈಬಿಡದೆ, ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿರುವೆನು,” ಎಂದರು.


ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಕೈಬಿಡದೆ, ನಮ್ಮನ್ನು ತ್ಯಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದರೋ ಹಾಗೆಯೇ ನಮ್ಮ ಸಂಗಡ ಇರಲಿ.


ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.


ಯೆಹೋವ ದೇವರು ಯೋಸೇಫನ ಸಂಗಡ ಇದ್ದುದರಿಂದ, ಅವನು ಏಳಿಗೆಯಾಗಿ ಈಜಿಪ್ಟಿನವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು