ಯೆಹೋಶುವ 1:6 - ಕನ್ನಡ ಸಮಕಾಲಿಕ ಅನುವಾದ6 ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |