Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:7 - ಕನ್ನಡ ಸಮಕಾಲಿಕ ಅನುವಾದ

7 “ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:7
25 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು.


ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.


ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.


ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.


ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:


ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.


“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು.


ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.


ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು