Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:8 - ಕನ್ನಡ ಸಮಕಾಲಿಕ ಅನುವಾದ

8 ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:8
40 ತಿಳಿವುಗಳ ಹೋಲಿಕೆ  

ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.


ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಇಸಾಕನು ಸಾಯಂಕಾಲ ಹೊಲದಲ್ಲಿ ಧ್ಯಾನಮಾಡುವುದಕ್ಕೆ ಹೋದಾಗ, ಕಣ್ಣೆತ್ತಿ ನೋಡಲು, ಒಂಟೆಗಳು ಬರುವುದನ್ನು ಕಂಡನು.


ಇದಲ್ಲದೆ ಮೋಶೆ ಈ ನಿಯಮದ ವಾಕ್ಯಗಳನ್ನು ಗ್ರಂಥದಲ್ಲಿ ಬರೆದು ತೀರಿಸಿದಾಗ,


ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು.


ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.


ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು.


ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು