ಯೆಹೋಶುವ 10:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.” ಅಧ್ಯಾಯವನ್ನು ನೋಡಿ |