Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರ್ ಪುಸ್ತಕದಲ್ಲಿ ಬರೆದಿದೆ. ಹೀಗೆ ಸೂರ್ಯ ಅಸ್ತಮಿಸಲು ತ್ವರೆಮಾಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಇದನ್ನು ‘ಯಾಷಾರ್’ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯ ಮುಳುಗಲು ಆತುರಪಡದೆ ಹೆಚ್ಚುಕಡಿಮೆ ಒಂದು ದಿನವೆಲ್ಲ ಆಕಾಶದ ಮಧ್ಯದಲ್ಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‍‍‍ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಅವರು ಶತ್ರುಗಳನ್ನು ಸೋಲಿಸುವವರೆಗೆ ಸೂರ್ಯನೂ ಚಲಿಸಲಿಲ್ಲ, ಚಂದ್ರನೂ ಚಲಿಸಲಿಲ್ಲ. ಈ ಕಥೆಯು ಯಾಷಾರ್ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಸೂರ್ಯನು ಆಕಾಶದ ಮಧ್ಯದಲ್ಲಿ ನಿಂತನು. ಅವನು ಇಡೀ ದಿನ ಚಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:13
29 ತಿಳಿವುಗಳ ಹೋಲಿಕೆ  

ನಿನ್ನ ಹಾರುವ ಬಾಣಗಳ ಬೆಳಗಿಗೂ, ನಿನ್ನ ಮಿಂಚುವ ಈಟಿಯ ಹೊಳಪಿಗೂ ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ.


ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.


ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.


ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.


ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.


ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ; ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ; ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ.


ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.


ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ:


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


“ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


“ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.


ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು