Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಪ್ರಕಾರ ಹಿಂದೆಯಾಗಲಿ ಮುಂದೆಯಾಗಲಿ ಸರ್ವೇಶ್ವರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟಂಥ ದಿವಸ ಇಲ್ಲವೇ ಇಲ್ಲ! ಸರ್ವೇಶ್ವರಸ್ವಾಮಿ ತಾವೇ ಇಸ್ರಯೇಲರ ಪರವಾಗಿ ಯುದ್ಧಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿವಸವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕಿಂತ ಮೊದಲೆಂದೂ ಹೀಗಾಗಿರಲಿಲ್ಲ; ಆಮೇಲೆಯೂ ಆಗಲಿಲ್ಲ. ಯೆಹೋವನು ಒಬ್ಬ ಮಾನವನ ಆಜ್ಞೆಯನ್ನು ಪಾಲಿಸಿದ ದಿನ ಅದಾಗಿತ್ತು. ಇಸ್ರೇಲರಿಗೋಸ್ಕರ ಯೆಹೋವನು ನಿಜವಾಗಿಯೂ ಯುದ್ಧಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:14
13 ತಿಳಿವುಗಳ ಹೋಲಿಕೆ  

ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು.


ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.


ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿದನು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು