Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:19 - ಕನ್ನಡ ಸಮಕಾಲಿಕ ಅನುವಾದ

19 ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರನ್ನು ಅವರ ನಗರಗಳಲ್ಲಿ ಸೇರಗೊಡಿಸಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿರಿ; ಬೇಗನೆ ಹಿಂದಟ್ಟಿ ಹಿಂದಾದ ವೈರಿಗಳನ್ನು ಹತಮಾಡುತ್ತಾ ಹೋಗಿರಿ; ಅವರನ್ನು ಅವರ ಪಟ್ಟಣಗಳಲ್ಲಿ ಸೇರಗೊಡಿಸಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:19
8 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.


ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.


ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು.


ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು