Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:2 - ಕನ್ನಡ ಸಮಕಾಲಿಕ ಅನುವಾದ

2 ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:2
16 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.


ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.


ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು