Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:24 - ಕನ್ನಡ ಸಮಕಾಲಿಕ ಅನುವಾದ

24 ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:24
18 ತಿಳಿವುಗಳ ಹೋಲಿಕೆ  

ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು.


ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”


ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು