ಯೆಹೋಶುವ 10:28 - ಕನ್ನಡ ಸಮಕಾಲಿಕ ಅನುವಾದ28 ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿ |