ಯೆಹೋಶುವ 10:3 - ಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಹೆಬ್ರೋನಿನ ಅರಸ ಹೋಹಾಮ್, ಯರ್ಮೂತಿನ ಅರಸ ಪಿರಾಮ್, ಲಾಕೀಷಿನ ಅರಸ ಯಾಫೀಯ, ಎಗ್ಲೋನಿನ ಅರಸ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ, ಅಧ್ಯಾಯವನ್ನು ನೋಡಿ |
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.