Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:36 - ಕನ್ನಡ ಸಮಕಾಲಿಕ ಅನುವಾದ

36 ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಎಗ್ಲೋನಿನಿಂದ ಹೆಬ್ರೋನಿಗೆ ಪ್ರಯಾಣ ಮಾಡಿ ಹೆಬ್ರೋನಿನ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:36
17 ತಿಳಿವುಗಳ ಹೋಲಿಕೆ  

ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.


ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ಇದಲ್ಲದೆ ಬಲವುಳ್ಳ ಪರಾಕ್ರಮಶಾಲಿಯಾದ ಪ್ರಾಯಸ್ತನಾಗಿದ್ದ ಚಾದೋಕನೂ, ಅವನ ತಂದೆಯ ಮನೆಯಿಂದ 22 ಮಂದಿ ಪ್ರಧಾನರೂ.


ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:


ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ


ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.


ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.


ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು:


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು.


ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು.


ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.


ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು