Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:39 - ಕನ್ನಡ ಸಮಕಾಲಿಕ ಅನುವಾದ

39 ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು ಆ ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:39
11 ತಿಳಿವುಗಳ ಹೋಲಿಕೆ  

ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು.


ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.


ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು.


ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು.


ದೆಬೀರಿನ ಅರಸನು. ಗೆದೆರಿನ ಅರಸನು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು