ಯೆಹೋಶುವ 10:4 - ಕನ್ನಡ ಸಮಕಾಲಿಕ ಅನುವಾದ4 “ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನೀವು ಬಂದು ನನಗೆ ಸಹಾಯಮಾಡಿ, ನಾವು ಯೆಹೋಶುವನೊಂದಿಗೂ ಇಸ್ರಯೇಲರೊಂದಿಗೂ ಒಪ್ಪಂದ ಮಾಡಿಕೊಂಡು ಗಿಬ್ಯೋನ್ಯರನ್ನು ಸೋಲಿಸೋಣ,” ಎಂದು ಹೇಳಿಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ಬಂದು ನನಗೆ ಸಹಾಯ ಮಾಡಿರಿ; ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆಮಾಡಿಕೊಂಡ ಗಿಬ್ಯೋನ್ಯರನ್ನು ಸೋಲಿಸೋಣ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನನ್ನೊಂದಿಗೆ ಬಂದು ಗಿಬ್ಯೋನಿನ ಮೇಲೆ ಧಾಳಿಮಾಡಲು ಸಹಾಯಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |