Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:42 - ಕನ್ನಡ ಸಮಕಾಲಿಕ ಅನುವಾದ

42 ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:42
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು.


ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು