Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:5 - ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ನಗರಗಳ ಐದುಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದರು. ಗಿಬ್ಯೋನಿಗೆ ಮುತ್ತಿಗೆ ಹಾಕಿ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:5
8 ತಿಳಿವುಗಳ ಹೋಲಿಕೆ  

ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.


ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ಆದರೆ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.


ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು.


ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು