Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋಶುವನು ಗಿಲ್ಗಾಲಿನಿಂದ, ಸಮಸ್ತ ಯುದ್ಧವೀರರೂ ಉಳಿದ ಪರಾಕ್ರಮಶಾಲಿಗಳ ಸಮೇತ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೆಹೋಶುವ ಎಲ್ಲಾ ಯೋಧರ ಮತ್ತು ಯುದ್ಧವೀರರ ಸಮೇತ ಗಿಲ್ಗಾಲಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೆಹೋಶುವನು ತನ್ನ ಎಲ್ಲ ಸೈನ್ಯದೊಂದಿಗೆ ಗಿಲ್ಗಾಲಿನಿಂದ ಹೊರಟನು. ಯೆಹೋಶುವನೊಂದಿಗೆ ಅತ್ಯುತ್ತಮವಾದ ಯೋಧರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:7
5 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.


“ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.


ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.


ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು