ಯೆಹೋಶುವ 11:12 - ಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತು ಯೆಹೋಶುವನು ಆ ಬೇರೆ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನೂ ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಅಧ್ಯಾಯವನ್ನು ನೋಡಿ |