Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:15
24 ತಿಳಿವುಗಳ ಹೋಲಿಕೆ  

“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.


“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.


ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.


ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.


ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು