Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:16 - ಕನ್ನಡ ಸಮಕಾಲಿಕ ಅನುವಾದ

16 ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:16
16 ತಿಳಿವುಗಳ ಹೋಲಿಕೆ  

ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.


ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:


ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.


“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.


ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ


ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು