Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:20 - ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:20
24 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.


ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು