ಯೆಹೋಶುವ 11:21 - ಕನ್ನಡ ಸಮಕಾಲಿಕ ಅನುವಾದ21 ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು. ಅಧ್ಯಾಯವನ್ನು ನೋಡಿ |