Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:22 - ಕನ್ನಡ ಸಮಕಾಲಿಕ ಅನುವಾದ

22 ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:22
19 ತಿಳಿವುಗಳ ಹೋಲಿಕೆ  

ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.


ಎಕ್ರೋನಿನ ಪಶ್ಚಿಮ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು.


ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.


ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.


ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.


ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.


ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.


ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.


ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು.


ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.


ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.


ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು