ಯೆಹೋಶುವ 11:23 - ಕನ್ನಡ ಸಮಕಾಲಿಕ ಅನುವಾದ23 ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು. ಅಧ್ಯಾಯವನ್ನು ನೋಡಿ |