ಯೆಹೋಶುವ 11:3 - ಕನ್ನಡ ಸಮಕಾಲಿಕ ಅನುವಾದ3 ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪೂರ್ವಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ಬುಡದಲ್ಲಿ ವಿುಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೇಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |