Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:4 - ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:4
8 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.


ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು.


ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು