Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:1
24 ತಿಳಿವುಗಳ ಹೋಲಿಕೆ  

“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.


ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.


ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.


ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.


ಗೂಡಿನಿಂದ ಹೊರಗೆ ಬಂದ ಹಕ್ಕಿಗಳ ಮರಿಗಳಂತೆ ಅಲೆದಾಡುವ ಹಾಗೆ, ಮೋವಾಬಿನ ಪುತ್ರಿಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.


ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.


ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.


ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು.


ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು.


ಅರ್ನೋನ್ ನದಿಯ ತೀರದಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸಿರ್ಯೋನ ಪರ್ವತದವರೆಗೂ ಹರಡಿತ್ತು.


“ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.


ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು.


ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.


ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,


ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು.


ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.


ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು.


ಮೋಶೆಯು ಇಸ್ರಾಯೇಲರ ಮುಂದೆ ಇಟ್ಟ ದೇವರ ನಿಯಮವು ಇದೇ.


ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.


ಊರಿಯನ ಮಗ ಗೆಬೆರನು ಗಿಲ್ಯಾದಿನಲ್ಲಿ ಅಧಿಕಾರಿ. ಅಮೋರಿಯರ ಅರಸನಾದ ಸೀಹೋನನ ದೇಶಕ್ಕೂ ಬಾಷಾನಿನ ಅರಸನಾದ ಓಗನ ದೇಶಕ್ಕೂ ಅವನೊಬ್ಬನೇ ಅಧಿಪತಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು